Acts 18:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.
Kannada BSI Bible 2016
ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.
Kannada Bible (KNCL) BSI 2016
ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.