Acts 18:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲೆಕ್ಸಾಂಡ್ರಿಯಾ ಪಟ್ಟಣದಿಂದ ಅಪೊಲ್ಲೋಸನೆಂಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಿದ್ಯಾವಂತನಾಗಿದ್ದನು ಮತ್ತು ಪವಿತ್ರ ಗ್ರಂಥದಲ್ಲಿ ಪಾಂಡಿತ್ಯ ಪಡೆದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.
Kannada BSI Bible 2016
ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು.
Kannada Bible (KNCL) BSI 2016
ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು.