Acts 18:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
Kannada BSI Bible 2016
ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು; ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದಾಗ್ಯೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
Kannada Bible (KNCL) BSI 2016
ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.