Acts 18:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
Kannada BSI Bible 2016
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
Kannada Bible (KNCL) BSI 2016
ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.