Acts 18:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.
Kannada BSI Bible 2016
ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.
Kannada Bible (KNCL) BSI 2016
ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.