Acts 18:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಜನರೆಲ್ಲರ ಮುಂದೆ ಯೆಹೂದ್ಯರ ವಿರುದ್ಧ ಬಹು ಬಲವಾಗಿ ವಾದಿಸಿ, ಪವಿತ್ರ ಗ್ರಂಥವನ್ನು ಆಧಾರವಾಗಿ ತೆಗೆದುಕೊಂಡು ಯೇಸುವೇ ಕ್ರಿಸ್ತನೆಂಬುದನ್ನು ಸ್ಪಷ್ಟವಾಗಿ ನಿರೂಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
Kannada BSI Bible 2016
ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೋಗಿ ಯೇಸುವೇ ಕ್ರಿಸ್ತನೆಂದು ಶಾಸ್ತ್ರಾಧಾರದಿಂದ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದ್ದವರಿಗೆ ಬಹಳ ಸಹಾಯಮಾಡಿದನು.
Kannada Bible (KNCL) BSI 2016
ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವೇ ಬರತಕ್ಕ ಕ್ರಿಸ್ತ ಆಗಿದ್ದಾರೆ ಎಂದು ಪವಿತ್ರ ವೇದಗಳಿಂದ ಸಿದ್ಧಾಂತಪಡಿಸಿ ತೋರಿಸುತ್ತಾ ಅಲ್ಲಿಯ ಯೆಹೂದ್ಯರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಿದನು.