Acts 18:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
Kannada BSI Bible 2016
ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಅವರ ಮನೆಗೆ ಹೋಗಿ ತಾನೂ ಅವರೂ ಒಂದೇ ಕಸಬಿನವರಾಗಿದ್ದದರಿಂದ ಅವರಲ್ಲಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರ ಮಾಡುವದು ಅವರ ಕಸಬಾಗಿತ್ತು.
Kannada Bible (KNCL) BSI 2016
ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು.