Acts 18:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನು ಸಭಾಮಂದಿರವನ್ನು ಬಿಟ್ಟು ತೀತಯುಸ್ತ ಎಂಬುವನ ಮನೆಗೆ ಹೋದನು. ಈ ಮನುಷ್ಯನು ನಿಜದೇವರನ್ನು ಆರಾಧಿಸುತ್ತಿದ್ದನು. ಇವನ ಮನೆ ಸಭಾಮಂದಿರದ ಪಕ್ಕದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.
Kannada BSI Bible 2016
ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
Kannada Bible (KNCL) BSI 2016
ಅಂತೆಯೇ ಅವರನ್ನು ಬಿಟ್ಟು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದ ತೀತಯುಸ್ತ ಎಂಬವನ ಮನೆಗೆ ಹೋದನು. ಅವನ ಮನೆ ಪ್ರಾರ್ಥನಾಮಂದಿರದ ಪಕ್ಕದಲ್ಲೇ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಪೌಲನು ಸಭಾಮಂದಿರವನ್ನು ಬಿಟ್ಟು ಹೊರಗೆ ಬಂದು ಪಕ್ಕದಲ್ಲಿಯೇ ಇದ್ದ ದೇವಭಕ್ತನಾದ ತೀತಯುಸ್ತ ಎಂಬುವನ ಮನೆಗೆ ಹೋದನು.