Acts 18:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
Kannada BSI Bible 2016
ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
Kannada Bible (KNCL) BSI 2016
ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭಾಮಂದಿರದ ನಾಯಕ ಕ್ರಿಸ್ಪ ಎಂಬುವನು ತನ್ನ ಮನೆಯವರೆಲ್ಲರೊಂದಿಗೆ ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಟ್ಟನು. ಪೌಲನ ಬೋಧನೆ ಕೇಳಿದ ಕೊರಿಂಥದವರಲ್ಲಿ ಇನ್ನೂ ಅನೇಕರು ವಿಶ್ವಾಸವನ್ನಿಟ್ಟು ದೀಕ್ಷಾಸ್ನಾನ ಪಡೆದುಕೊಂಡರು.