Acts 19:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
Kannada BSI Bible 2016
ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೆವ್ವಬಿಡಿಸುವವರೆನಿಸಿಕೊಂಡು ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದೆವ್ವಹಿಡಿದವರ ಮೇಲೆ - ಪೌಲನು ಸಾರುವ ಯೇಸುವಿನ ಆಣೆ ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವದಕ್ಕೆ ತೊಡಗಿದರು.
Kannada Bible (KNCL) BSI 2016
“ದೆವ್ವಬಿಡಿಸುವವರು” ಎನಿಸಿಕೊಂಡು ಊರೂರು ಸುತ್ತುತ್ತಿದ್ದ ಕೆಲವು ಯೆಹೂದ್ಯರು ಸಹ ಪ್ರಭು ಯೇಸುವಿನ ನಾಮವನ್ನು ಬಳಸಿ ದೆವ್ವಬಿಡಿಸಲು ಯತ್ನಿಸಿದರು. ಇವರು ದೆವ್ವಗಳಿಗೆ, “ಪೌಲನು ಸಾರುತ್ತಿರುವ ಯೇಸುವಿನ ನಾಮದಲ್ಲಿ ನಿಮಗೆ ಆಣೆಯಿಟ್ಟು ಆಜ್ಞಾಪಿಸುತ್ತೇವೆ,” ಎಂದು ಹೇಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.