Acts 19:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಂದು ಸಲ ದೆವ್ವವೊಂದು ಅವರಿಗೆ, “ನನಗೆ ಯೇಸುವೂ ಗೊತ್ತು ಪೌಲನೂ ಗೊತ್ತು. ಆದರೆ ನೀವು ಯಾರು?” ಎಂದು ಪ್ರತ್ಯುತ್ತರ ಕೊಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;
Kannada BSI Bible 2016
ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೆವ್ವವು ಅವರಲ್ಲಿ ಇಬ್ಬರಿಗೆ - ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ನೀವಾದರೆ ಯಾರು? ಎಂದು ಹೇಳಿತು;
Kannada Bible (KNCL) BSI 2016
ಆದರೆ ಆ ದೆವ್ವ ಅವರಿಗೆ, “ಯೇಸು ನನಗೆ ಗೊತ್ತು, ಪೌಲನನ್ನು ನಾನು ಬಲ್ಲೆ; ಆದರೆ ನೀವು ಯಾರು?” ಎಂದು ಪ್ರಶ್ನಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುರಾತ್ಮವು ಅವರಿಗೆ ಉತ್ತರವಾಗಿ, “ಯೇಸುವನ್ನು ನಾನು ಬಲ್ಲೆ, ಪೌಲನೂ ನನಗೆ ಗೊತ್ತು, ಆದರೆ ನೀವು ಯಾರು?” ಎಂದು ಕೇಳಿ,