Acts 19:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
Kannada BSI Bible 2016
ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದೆವ್ವಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು ಅವರಿಬ್ಬರನ್ನೂ ಸೋಲಿಸಿ ಬಲಾತ್ಕರಿಸಿದ್ದರಿಂದ ಅವರು ಬೆತ್ತಲೆಯಾಗಿಯೂ ಗಾಯವುಳ್ಳವರಾಗಿಯೂ ಆ ಮನೆಯೊಳಗಿಂದ ಓಡಿಹೋದರು.
Kannada Bible (KNCL) BSI 2016
ಅಲ್ಲದೆ ದೆವ್ವ ಹಿಡಿದಿದ್ದ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅಪ್ಪಳಿಸಿ, ಅವರೆಲ್ಲರನ್ನೂ ಅಧೀನಪಡಿಸಿದನು. ಅವರು ಗಾಯಗೊಂಡು, ನಗ್ನರಾಗಿ, ಆ ಮನೆಯಿಂದ ಓಡಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು.