Acts 19:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನಂಬಿಕೊಂಡಾಗ ಪವಿತ್ರಾತ್ಮನನ್ನು ಹೊಂದಿಕೊಂಡಿರಾ?” ಎಂದು ಕೇಳಿದನು. ಆ ಶಿಷ್ಯರು ಅವನಿಗೆ, “ಪವಿತ್ರಾತ್ಮನು ಇದ್ದಾನೆ ಎಂಬುದನ್ನು ನಾವು ಇದುವರೆಗೆ ಕೇಳಿಯೂ ಇಲ್ಲ!” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.
Kannada BSI Bible 2016
ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ ಎಂದು ಅವರನ್ನು ಕೇಳಲು ಅವರು ಅವನಿಗೆ - ಇಲ್ಲ, ಪವಿತ್ರಾತ್ಮವರವು ಉಂಟೆಂಬದನ್ನೇ ನಾವು ಕೇಳಲಿಲ್ಲ ಅಂದರು.
Kannada Bible (KNCL) BSI 2016
“ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ವಿಶ್ವಾಸವನ್ನಿಟ್ಟಾಗ ಪವಿತ್ರಾತ್ಮರನ್ನು ಪಡೆದುಕೊಂಡಿರೋ?” ಎಂದು ಪ್ರಶ್ನೆ ಮಾಡಿದನು. ಅದಕ್ಕೆ ಅವರು, “ಇಲ್ಲ, ಪವಿತ್ರಾತ್ಮ ಇದ್ದಾರೆಂಬುದನ್ನು ನಾವು ಕೇಳಿಯೇ ಇಲ್ಲ,” ಎಂದರು.