Acts 19:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
Kannada BSI Bible 2016
ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.
Kannada Bible (KNCL) BSI 2016
ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.