Acts 19:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
Kannada BSI Bible 2016
ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ನಿಂತನು.
Kannada Bible (KNCL) BSI 2016
ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.