Acts 19:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
Kannada BSI Bible 2016
ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀದೇವಿಯ ಗುಡಿಯಂತೆ ಸಣ್ಣ ಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಕೆಲಸಕೊಡುತ್ತಿದ್ದನು.
Kannada Bible (KNCL) BSI 2016
ಅಲ್ಲಿ ದೆಮೆತ್ರಿಯ ಎಂಬ ಅಕ್ಕಸಾಲಿಗನಿದ್ದನು. ಇವನು ಅರ್ತೆಮೀ ದೇವತೆಯ ಗುಡಿಗೆ ಬೆಳ್ಳಿಯ ಆಕೃತಿಯನ್ನು ಮಾಡುತ್ತಿದ್ದನು. ಈ ಕಸಬುದಾರರಿಗೆ ಇದು ತುಂಬ ಲಾಭದಾಯಕವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇಮೇತ್ರಿಯ ಎಂಬ ಒಬ್ಬ ಅಕ್ಕಸಾಲಿಗನು ಅರ್ತೆಮೀ ದೇವಿಯ ಬೆಳ್ಳಿಯ ಮೂರ್ತಿಗಳನ್ನು ಮಾಡುವವನಾಗಿದ್ದು, ಆ ಶಿಲ್ಪಿಗಳ ಹಣ ಸಂಪಾದನೆಗೆ ಬಹಳ ವ್ಯಾಪಾರವನ್ನು ಒದಗಿಸುತ್ತಿದ್ದನು.