Acts 19:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.
Kannada BSI Bible 2016
ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ನಮ್ಮ ಉದ್ಯೋಗಕ್ಕೆ ಅಪಕೀರ್ತಿ ಬರುವ ಹಾಗಿರುವದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ ಎಲ್ಲಾ ಆಸ್ಯಸೀಮೆಯೂ ಲೋಕವೂ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆಯೂ ಗಂಡಾಂತರವುಂಟೆಂದು ಹೇಳಿದನು.
Kannada Bible (KNCL) BSI 2016
ಇದರಿಂದಾಗಿ ನಮ್ಮ ಕಸಬಿಗೇ ಕೆಟ್ಟ ಹೆಸರು ಬರುವ ಅಪಾಯವಿದೆ. ಅಷ್ಟೇ ಏಕೆ, ಅರ್ತೆಮೀ ಮಹಾದೇವಿಯ ಗುಡಿ ಹೇಳಹೆಸರಿಲ್ಲದಂತಾಗುವ ಸಂಭವವಿದೆ. ಇಡೀ ಏಷ್ಯದಲ್ಲೂ ಜಗತ್ತಿನ ಎಲ್ಲೆಲ್ಲೂ ಪೂಜಿಸಲಾಗುವ ಆ ದೇವತೆಯ ವೈಭವ ಅಳಿದುಹೋಗುವ ಅಪಾಯವಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಿಂದ ಈಗ ನಮ್ಮ ವೃತ್ತಿಗೆ ಅಪಾಯ ಬಂದಿರುವುದಲ್ಲದೆ ಅರ್ತೆಮೀ ಮಹಾದೇವಿಯ ಗುಡಿಯ ಬಗ್ಗೆಯೂ ಯೋಚಿಸಬೇಕು. ಏಕೆಂದರೆ ಏಷ್ಯಾದಲ್ಲಿಯೂ ಇಡೀ ಜಗತ್ತಿನಲ್ಲೆಲ್ಲಾ ಪೂಜಿಸುತ್ತಿರುವ ದೇವಿಯ ಮಹತ್ವವು ಸಹ ಕುಂದಿಹೋಗುವಂತಿದೆ,” ಎಂದನು.