Acts 19:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಮಾತುಗಳನ್ನು ಕೇಳಿದ ಜನರು ಬಹು ಕೋಪಗೊಂಡು, “ಎಫೆಸದ ಅರ್ತೆಮಿದೇವಿಯೇ ಮಹಾದೇವಿ!” ಎಂದು ಕೂಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
Kannada BSI Bible 2016
ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಈ ಮಾತುಗಳನ್ನು ಕೇಳಿ ಕೋಪಾಕ್ರಾಂತರಾಗಿ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಆರ್ಭಟಿಸಿದರು.
Kannada Bible (KNCL) BSI 2016
ಈ ಮಾತುಗಳನ್ನು ಕೇಳಿದ ಆ ಜನರು ಕೋಪಾವೇಶದಿಂದ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮಾತುಗಳನ್ನು ಕೇಳಿ ಅವರು ಉಗ್ರರಾಗಿ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.