Acts 19:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Kannada BSI Bible 2016
ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಊರೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕಶಾಲೆಯೊಳಗೆ ನುಗ್ಗಿದರು.
Kannada Bible (KNCL) BSI 2016
ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.