Acts 19:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನು ಅವರಿಗೆ, “ನೀವು ಯಾವ ಬಗೆಯ ದೀಕ್ಷಾಸ್ನಾನ ಪಡೆದಿರಿ?” ಎಂದು ಕೇಳಿದನು. ಅವರು, “ಯೋಹಾನನು ಬೋಧಿಸಿದ ದೀಕ್ಷಾಸ್ನಾನವನ್ನು ನಾವು ಮಾಡಿಸಿಕೊಂಡೆವು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.
Kannada BSI Bible 2016
ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ನೀವು ಯಾವದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ ಎಂದು ಕೇಳಿದ್ದಕ್ಕೆ ಅವರು - ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡೆವು ಅಂದರು.
Kannada Bible (KNCL) BSI 2016
ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಾಗಾದರೆ ನೀವು ಯಾವ ದೀಕ್ಷಾಸ್ನಾನವನ್ನು ಪಡೆದುಕೊಂಡಿದ್ದೀರಿ?” ಎಂದು ಪೌಲನು ಕೇಳಿದಾಗ ಅವರು, “ಯೋಹಾನನ ದೀಕ್ಷಾಸ್ನಾನವನ್ನು,” ಎಂದರು.