Acts 19:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ, ಪೌಲನ ಸ್ನೇಹಿತರಾಗಿದ್ದ ಈ ದೇಶದ ನಾಯಕರುಗಳಲ್ಲಿ ಕೆಲವರು ಅವನಿಗೆ ಒಂದು ಸಂದೇಶವನ್ನು ಕಳುಹಿಸಿ ಕ್ರೀಡಾಂಗಣದೊಳಗೆ ಹೋಗಬಾರದೆಂದು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
Kannada BSI Bible 2016
ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಅವನಿಗೆ ಸ್ನೇಹಿತರಾಗಿದ್ದದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ - ನೀನು ನಾಟಕಶಾಲೆಯೊಳಗೆ ಹೋಗಿ ನಿನ್ನನ್ನು ಅಪಾಯಕ್ಕೆ ಗುರಿಮಾಡಿಕೊಳ್ಳಬೇಡ ಎಂದು ಬೇಡಿಕೊಂಡರು.
Kannada Bible (KNCL) BSI 2016
ಇದೂ ಅಲ್ಲದೆ, ಪೌಲನ ಸ್ನೇಹಿತರಾದ ಕೆಲವು ಸ್ಥಳೀಯ ಅಧಿಕಾರಿಗಳು, ಕ್ರೀಡಾಂಗಣಕ್ಕೆ ಹೋಗುವ ಸಾಹಸವನ್ನು ಮಾಡಕೂಡದೆಂದು ವಿನಂತಿಸಿ, ಪೌಲನಿಗೆ ಹೇಳಿಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನ ಸ್ನೇಹಿತರಾಗಿದ್ದ ಏಷ್ಯಾ ಸೀಮೆಯ ಕೆಲವು ಅಧಿಕಾರಿಗಳೂ ಈ ಕ್ರೀಡಾಂಗಣದೊಳಗೆ ಹೋಗುವ ಸಾಹಸ ಮಾಡಬಾರದೆಂದು ವಿನಂತಿಸಿ ಅವನಿಗೆ ಸಂದೇಶ ಕಳುಹಿಸಿದರು.