Acts 19:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
Kannada BSI Bible 2016
ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯು ಗಲಿಬಿಲಿಯಾಯಿತು, ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ. ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು.
Kannada Bible (KNCL) BSI 2016
ಸಭೆಯಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಬೊಬ್ಬೆಹಾಕಿದರೆ, ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗಾಡಲಾರಂಭಿಸಿದರು. ಬಹುಜನರಿಗೆ ತಾವು ಅಲ್ಲಿಗೆ ಬಂದುದರ ಕಾರಣವೇ ತಿಳಿದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಸಮೂಹ ಗಲಿಬಿಲಿಗೊಂಡಿತ್ತು. ಕೆಲವರು ಒಂದು ರೀತಿಯಾಗಿಯೂ ಇನ್ನು ಕೆಲವರು ಬೇರೊಂದು ವಿಧವಾಗಿಯೂ ಕೂಗುತ್ತಿದ್ದರು. ಬಹು ಪಾಲು ಜನರಿಗೆ ತಾವೇಕೆ ಅಲ್ಲಿಗೆ ಬಂದಿದ್ದೇವೆಂಬುದರ ಬಗ್ಗೆ ತಿಳಿದಿರಲೇ ಇಲ್ಲ.