Acts 19:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಜನರ ಮುಂದೆ ನೂಕಿ ಮಾತಾಡಲು ಪುಸಲಾಯಿಸಿದರು. ಅವನು ಜನರಿಗೆ ಮೌನವಾಗಿರುವಂತೆ ಕೈಸನ್ನೆಮಾಡಿ ಜನರ ಪರವಾಗಿ ವಾದಿಸಬೇಕೆಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
Kannada BSI Bible 2016
ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
Kannada Bible (KNCL) BSI 2016
ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.