Acts 19:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮಲ್ಲಿ ನ್ಯಾಯಾಲಯಗಳಿವೆ ಮತ್ತು ನ್ಯಾಯಾಧೀಶರುಗಳು ಇದ್ದಾರೆ. ದೇಮೇತ್ರಿಯನಿಗಾಗಲಿ ಮತ್ತು ಅವನೊಂದಿಗೆ ಕೆಲಸ ಮಾಡುವ ಜನರಿಗಾಗಲಿ ಯಾರ ಮೇಲಾದರೂ ದೂರುಗಳಿವೆಯೇ? ದೂರುಗಳಿದ್ದರೆ, ಅವರು ನ್ಯಾಯಾಲಯಗಳಿಗೆ ಹೋಗಬೇಕು! ಅವರು ಪರಸ್ಪರ ವಾದ ಮಾಡಲು ಅದೇ ತಕ್ಕ ಸ್ಥಳ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
Kannada BSI Bible 2016
ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ಒಂದು ವ್ಯವಹಾರವಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
Kannada Bible (KNCL) BSI 2016
ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಸಹ ಶಿಲ್ಪಿಗಳಿಗೂ ಯಾವುದೇ ವ್ಯಕ್ತಿಯ ವಿರುದ್ಧ ಏನಾದರೂ ಆಪಾದನೆಗಳಿದ್ದರೆ ಅವರಿಗಾಗಿ ನ್ಯಾಯಾಲಯಗಳು ತೆರೆದಿವೆ. ರಾಜ್ಯಪಾಲರು ಇದ್ದಾರೆ; ಅವರ ಮುಂದೆ ದೂರುಗಳನ್ನು ಸಲ್ಲಿಸಲಿ.