Acts 19:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ಆ ವ್ಯಕ್ತಿಯೇ ಯೇಸು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
Kannada BSI Bible 2016
ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಪೌಲನು - ಯೋಹಾನನು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರವಾತನಲ್ಲಿ ಅಂದರೆ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬದಾಗಿ ಜನರಿಗೆ ಹೇಳಿದನು ಎಂದು ಹೇಳಲು
Kannada Bible (KNCL) BSI 2016
ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.