Acts 19:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.
Kannada BSI Bible 2016
ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಕೂಟದ ವಿಷಯದಲ್ಲಿ ಇದು ಒಂದು ದಂಗೆ ಎಂಬದಾಗಿ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆದರೆ ನವ್ಮಿುಂದ ಉತ್ತರಕೊಡುವದಕ್ಕೆ ಆಗುವದೇ ಇಲ್ಲ ಎಂದು ಹೇಳಿದನು.
Kannada Bible (KNCL) BSI 2016
ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು.