Acts 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
Kannada BSI Bible 2016
ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
Kannada Bible (KNCL) BSI 2016
ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.