Acts 19:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
Kannada BSI Bible 2016
ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು.
Kannada Bible (KNCL) BSI 2016
ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.