Acts 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
Kannada BSI Bible 2016
ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಪ್ರಸಂಗ ಮಾಡಿದನು - ಯೆಹೂದ್ಯರೇ, ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಜನರೇ, ಈ ಸಂಗತಿಯು ಏನೆಂದು ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತಿಗೆ ಕಿವಿಗೊಡಿರಿ;
Kannada Bible (KNCL) BSI 2016
ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.