Acts 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
Kannada BSI Bible 2016
ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನ ಆಗಮನದ ಗಂಭೀರವಾದ ಮಹಾದಿನವು ಬರುವದಕ್ಕೆ ಮುಂಚೆ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂವಿುಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ, ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು;
Kannada Bible (KNCL) BSI 2016
ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.