Acts 2:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
Kannada BSI Bible 2016
ಇಸ್ರಾಯೇಲ್‌ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
Kannada Bible (KNCL) BSI 2016
“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.