Acts 2:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
Kannada BSI Bible 2016
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.
Kannada Bible (KNCL) BSI 2016
ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.