Acts 2:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
Kannada BSI Bible 2016
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.
Kannada Bible (KNCL) BSI 2016
ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.