Acts 2:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
Kannada BSI Bible 2016
ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ.
Kannada Bible (KNCL) BSI 2016
“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.