Acts 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
Kannada BSI Bible 2016
ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು.
Kannada Bible (KNCL) BSI 2016
ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.