Acts 2:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
Kannada BSI Bible 2016
ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ
Kannada Bible (KNCL) BSI 2016
ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.