Acts 2:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
Kannada BSI Bible 2016
ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂದಾಗುವದನ್ನು ಕಂಡು ಕ್ರಿಸ್ತನ ಪುನರುತ್ಥಾನವನ್ನೇ ಕುರಿತು - ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ ಆತನ ಶರೀರವು ಕೊಳೆಯುವ ಅವಸ್ಥೆಯನ್ನನುಭವಿಸುವದಿಲ್ಲವೆಂತಲೂ ಹೇಳಿದನು.
Kannada Bible (KNCL) BSI 2016
ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’