Acts 2:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, (Verses 34-35)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
Kannada BSI Bible 2016
ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನೋಡಿ ಕೇಳುವದನ್ನು ಸುರಿಸಿದ್ದಾನೆ. ದಾವೀದನು ಆಕಾಶಕ್ಕೆ ಏರಿಹೋಗಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ - ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದೇ.
Kannada Bible (KNCL) BSI 2016
ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ: ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು