Acts 2:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
Kannada BSI Bible 2016
ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.
Kannada Bible (KNCL) BSI 2016
“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.