Acts 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
Kannada BSI Bible 2016
ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಪ್ಪಳವಾದಾಗ ಜನರು ಗುಂಪುಗುಂಪಾಗಿ ಕೂಡಿಬಂದು ಪ್ರತಿಯೊಬ್ಬರು ತಮ್ಮ ತಮ್ಮ ಭಾಷೆಯಲ್ಲೇ ಇವರು ಮಾತಾಡುವದನ್ನು ಕೇಳಿ ಭ್ರಮೆಗೊಂಡರು.
Kannada Bible (KNCL) BSI 2016
ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.