Acts 20:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು ಮತ್ತೆ ಮೇಲಂತಸ್ತಿಗೆ ಹೋಗಿ ರೊಟ್ಟಿಯನ್ನು ಮುರಿದು ಊಟಮಾಡಿದನು. ಪೌಲನು ಅವರೊಂದಿಗೆ ದೀರ್ಘಕಾಲ ಮಾತಾಡಿದನು. ಅಷ್ಟರಲ್ಲಿಯೇ ಮುಂಜಾನೆಯಾಗಿತ್ತು. ಬಳಿಕ ಪೌಲನು ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
Kannada BSI Bible 2016
ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಸಲ್ಲಾಪಮಾಡಿ ಹಾಗೆ ಹೊರಟುಹೋದನು.
Kannada Bible (KNCL) BSI 2016
ಅನಂತರ ಪೌಲನು ಮೇಲಂತಸ್ತಿಗೆ ಹಿಂದಿರುಗಿ, ರೊಟ್ಟಿಯನ್ನು ಮುರಿದು ಸಹಭೋಜನ ಮಾಡಿದನು. ಮುಂಜಾವದವರೆಗೂ ಅವರೊಡನೆ ಮಾತನಾಡಿ ಅಲ್ಲಿಂದ ಹೊರಟುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.