Acts 20:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
Kannada BSI Bible 2016
ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
Kannada Bible (KNCL) BSI 2016
ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.