Acts 20:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
Kannada BSI Bible 2016
ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ - ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲದಲ್ಲಿಯೂ ಹೇಗೆ ನಡಕೊಂಡೆನೆಂಬದನ್ನು ನೀವೇ ಬಲ್ಲಿರಿ.
Kannada Bible (KNCL) BSI 2016
ಬಂದಮೇಲೆ ಅವರಿಗೆ ಹೀಗೆಂದನು: “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ.