Acts 20:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
Kannada BSI Bible 2016
ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.
Kannada Bible (KNCL) BSI 2016
ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.