Acts 20:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
Kannada BSI Bible 2016
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.
Kannada Bible (KNCL) BSI 2016
ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.