Acts 20:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
Kannada BSI Bible 2016
ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.
Kannada Bible (KNCL) BSI 2016
“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.