Acts 20:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಯಾವಾಗಲೂ ನನ್ನ ಅಗತ್ಯತೆಗಳನ್ನು ಮತ್ತು ನನ್ನೊಂದಿಗಿರುವವರ ಅಗತ್ಯತೆಗಳನ್ನು ಪೂರೈಸುವುದಕ್ಕಾಗಿ ದುಡಿಯುತ್ತಿದ್ದೆನು ಎಂಬುದು ನಿಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.
Kannada BSI Bible 2016
ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
Kannada Bible (KNCL) BSI 2016
ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.