Acts 20:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರೆಲ್ಲರೂ ಬಹಳವಾಗಿ ಅತ್ತರು. “ನೀವು ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲ”ವೆಂದು ಪೌಲನು ಹೇಳಿದ್ದರಿಂದ ಅವರು ಬಹಳ ದುಃಖಗೊಂಡಿದ್ದರು. ಅವರು ಪೌಲನನ್ನು ಅಪ್ಪಿಕೊಂಡು ಮುದ್ದಿಟ್ಟರು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು. (Verses 37-38)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
Kannada BSI Bible 2016
ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಇನ್ನು ಮೇಲೆ ನನ್ನ ಮುಖವನ್ನು ಕಾಣುವದಿಲ್ಲವೆಂದು ಪೌಲನು ಹೇಳಿದ ಮಾತಿಗೆ ಅವರು ವಿಶೇಷವಾಗಿ ವ್ಯಥೆಪಟ್ಟು ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಆಮೇಲೆ ಅವರು ಅವನನ್ನು ಹಡಗಿಗೆ ಸಾಗಕಳುಹಿಸಿದರು.
Kannada Bible (KNCL) BSI 2016
ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.