Acts 20:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಜನರು ಅವನೊಂದಿಗಿದ್ದರು. ಅವರು ಯಾರೆಂದರೆ: ಬೆರೋಯ ಪಟ್ಟಣದ ಪುರ್ರನ ಮಗನಾದ ಸೋಪತ್ರನು, ಥೆಸಲೋನಿಕ ಪಟ್ಟಣದ ಆರಿಸ್ತಾರ್ಕ ಮತ್ತು ಸೆಕುಂದ, ದರ್ಬೆ ಪಟ್ಟಣದ ಗಾಯ ಮತ್ತು ತಿಮೊಥೆಯ, ಅಲ್ಲದೆ ಏಷ್ಯಾದ ತುಖಿಕ ಹಾಗು ತ್ರೊಫಿಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.
Kannada BSI Bible 2016
ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರ್ರನ ಮಗನಾದ ಬೆರೋಯಪಟ್ಟಣದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಪಟ್ಟಣದ ಗಾಯನೂ ತಿಮೊಥೆಯನೂ ಆಸ್ಯಸೀಮೆಯವರಲ್ಲಿ ತುಖಿಕನೂ ತ್ರೊಫಿಮನೂ ಆಸ್ಯಸೀಮೆಯವರೆಗೆ ಅವನ ಜೊತೆಯಲ್ಲಿ ಹೋದರು.
Kannada Bible (KNCL) BSI 2016
ಬೆರೋಯ ಪಟ್ಟಣದ ಪುರನ ಮಗ ಸೋಪತ್ರನು ಅವನೊಡನೆ ಹೋದನು. ಅಂತೆಯೇ ಥೆಸಲೋನಿಕದ ಅರಿಸ್ತಾರ್ಕ ಹಾಗು ಸೆಕುಂದ, ದೆರ್ಬೆ ಪಟ್ಟಣದ ಗಾಯ, ಏಷ್ಯದ ತುಖಿಕ ಹಾಗು ತಿಮೊಥೇಯ ಅವನೊಡನೆ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.