Acts 20:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರ ಹುಳಿ ರಹಿತ ರೊಟ್ಟಿ ಹಬ್ಬದ ನಂತರ ನಾವು ಫಿಲಿಪ್ಪಿ ಪಟ್ಟಣದ ಹಡಗಿನಲ್ಲಿ ಹೋದೆವು. ಐದು ದಿನಗಳಾದ ನಂತರ ನಾವು ಇವರನ್ನು ತ್ರೋವದಲ್ಲಿ ಸಂಧಿಸಿದೆವು. ಅಲ್ಲಿ ನಾವು ಏಳು ದಿನ ತಂಗಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
Kannada BSI Bible 2016
ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿವಸಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸದಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿವಸಗಳಿದ್ದೆವು.
Kannada Bible (KNCL) BSI 2016
ನಾವು ಹುಳಿರಹಿತ ರೊಟ್ಟಿಯ ಹಬ್ಬದ ನಂತರ ಫಿಲಿಪ್ಪಿಯಿಂದ ನೌಕಾಯಾನ ಹೊರಟೆವು. ಐದು ದಿನಗಳ ನಂತರ ತ್ರೋವದಲ್ಲಿ ಅವರನ್ನು ಸೇರಿ, ಅಲ್ಲಿ ಏಳುದಿನ ತಂಗಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.